ಗ್ರಾಮಾಂತರ ಸುದ್ದಿಜಿಲ್ಲಾ ವಾರ್ತೆತಾಲೂಕು ಸುದ್ದಿರಾಜ್ಯ ವಾರ್ತೆ

ಸುಲ್ಕೇರಿ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಶಾಖಾ ಕಟ್ಟಡ ಉದ್ಘಾಟನೆ

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಶಿರ್ಲಾಲು ಇದರ ಸುಲ್ಕೇರಿಮೊಗ್ರು ಗ್ರಾಮದ ನಡಿಬೆಟ್ಟುವಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶಾಖಾ ಕಟ್ಟಡದ ಉದ್ಘಾಟನೆಯು ಸುಲ್ಕೇರಿಮೊಗ್ರುವಿನಲ್ಲಿ ನಡೆಯಿತು.
ನೂತನ ಶಾಖಾ ಕಟ್ಟಡದ ಉದ್ಘಾಟನೆಯನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ, ಸಹಕಾರ ರತ್ನ ಡಾ| ಎಂ.ಎನ್ ರಾಜೇಂದ್ರ ಕುಮಾರ್ ನೆರವೇರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರು ವಹಿಸಿದ್ದರು.

ಬ್ಯಾಂಕ್ ಕಛೇರಿಯ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಕೆ.ಹರೀಶ್ ಕುಮಾರ್ ಭದ್ರತಾ ಕೋಶದ ಉದ್ಘಾಟನೆ, ವಾಣಿಜ್ಯ ಸಂಕೀರ್ಣದ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ನೆರವೇರಿಸಿದರು.
ಮುಖ್ಯ ಅತಿಥಿಯಾಗಿ ಮಂಗಳೂರು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಬಿ. ನಿರಂಜನ, ಮಂಗಳೂರು ಸಹಕಾರಿ ಸಂಘಗಳ ಉಪನಿಬಂಧಕ ಪ್ರವೀಣ ಬಿ. ನಾಯಕ್, ಅಳದಂಗಡಿ ಜಿ.ಪಂ. ಸದಸ್ಯ ಶೇಖರ ಕುಕ್ಕೇಡಿ, ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕ ರಾಜು, ಬೆಳ್ತಂಗಡಿ ಪಿ.ಎಲ್‌ಡಿ ಬ್ಯಾಂಕ್ ಅಧ್ಯಕ್ಷ ಸೋಮನಾಥ ಬಂಗೇರ, ಪ್ರಗತಿಪರ ಕೃಷಿಕ ಎಂ. ಗಂಗಾಧರ ಮಿತ್ತಮಾರು, ಅಳದಂಗಡಿ ತಾ. ಪಂ. ಸದಸ್ಯೆ ವಿನುಷಾ ಪ್ರಕಾಶ್, ಅಡಿಂಜೆ ತಾ.ಪಂ. ಸದಸ್ಯ ಸುಧೀರ್ ಆರ್ ಸುವರ್ಣ, ಬೆಳ್ತಂಗಡಿ ಸಹಕಾರ ಅಭಿವೃದ್ಧಿ ಅಧಿಕಾರಿ ಸುಕನ್ಯ ಭಟ್, ಉಪಸ್ಥಿತರಿದ್ದರು.
ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ಶಿರ್ಲಾಲು ಅಧ್ಯಕ್ಷ ನವೀನ್ ಕೆ. ಸಾಮಾನಿ ಉಪಸ್ಥಿತರಿದ್ದರು.

ನಿಮ್ಮದೊಂದು ಉತ್ತರ