ಬೆಳ್ತಂಗಡಿ: ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ಶಿರಾಡಿ ಘಾಟ್ನಲ್ಲಿ ಹಲವೆಡೆ ಭೂಕುಸಿತ ಉಂಟಾಗಿದೆ. ನಿರಂತರ ಸುರಿಯುತ್ತಿರುವ ಭಾರೀ ಮಳೆಗೆ ಸಕಲೇಶಪುರ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂ ಕುಸಿತ ಉಂಟಾಗಿದೆ. ಬೆಳಿಗ್ಗೆ ದೋಣಿಗಾಲ್ ಸಮೀಪ ಹೆದ್ದಾರಿಯು ಸಂಪೂರ್ಣವಾಗಿ ಕುಸಿದಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಿರಾಡಿಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಹಾಸನದಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ಧರ್ಮಸ್ಥಳ, ಮಂಗಳೂರು, ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮೂಡಿಗೆರೆ, ಹಾನಬಾಳು, ಕೊಟ್ಟಿಗೆಹಾರದ ಮೂಲಕ ಬದಲಿ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.ಮಂಗಳೂರಿಗೆ ಚಾರ್ಮಾಡಿ ಘಾಟ್ ಮೂಲಕ ಸೂಚಿಸಿದ್ದು,
ಪೊಲೀಸರು ಕಳುಹಿಸುವ ವ್ಯವಸ್ಥೆ ಮಾಡುತ್ತಿದ್ದ್ದಾರೆ.