ಪುತ್ತೂರು: ಹತ್ಯೆಗೊಳಗಾದ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರ್ ಅವರ ಪತ್ನಿ ಶ್ರೀಮತಿ ನೂತನ ಕುಮಾರಿ ಎಂ. ಅವರನ್ನು ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು ಮುಖ್ಯಮಂತ್ರಿ ಸಚಿವಾಲಯದಲ್ಲಿನ ಗ್ರೂಪ್ ಸಿ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ಹತ್ಯೆಯಾದ ಪ್ರವೀಣ್ ಪತ್ನಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಉದ್ಯೋಗ ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ದೊಡ್ಡಬಳ್ಳಾಪುರದ ಬಿಜೆಪಿ
ಸಮಾವೇಶದಲ್ಲಿ ಘೋಷಿಸಿದ್ದರು.