ಕ್ರೈಂ ವಾರ್ತೆ

ಪಡಂಗಡಿಯಲ್ಲಿ ಬಸ್- ಬೈಕ್ ನಡುವೆ ಅಪಘಾತ ದ್ವಿಚಕ್ರ ವಾಹನ ಸವಾರ ಮೃತ್ಯು

ಪಡಂಗಡಿ: ಪಡಂಗಡಿ ಗ್ರಾಮ ಪಂಚಾಯತ್ ಬಳಿಯ ರಸ್ತೆಯಲ್ಲಿ ಸರಕಾರಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಫಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಮಾ.೨೭ ರಂದು ಸಂಜೆ ನಡೆದಿದೆ.


ಘಟನೆಯಿಂದ ಪೊಯ್ಯೆಗುಡ್ಡೆ ನಿವಾಸಿ, ಪಲ್ಸರ್ ಬೈಕ್ ಸವಾರ ಝಾಬೀರ್(26.ವ) ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು.


ಧರ್ಮಸ್ಥಳದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಸರಕಾರಿ ಬಸ್ಸು ಮತ್ತು ಬೈಕ್ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಈ ದುಘ೯ಟನೆ ನಡೆದಿದೆ . ಝಾಬೀರ್ ರವರು 15 ದಿನಗಳ ಹಿಂದೆಯಷ್ಟೇ ವಿದೇಶದಿಂದ ಊರಿಗೆ ಬಂದಿದ್ದರು ಎಂದು ತಿಳಿದು ಬಂದಿದೆ. ಈ ಸಂಬಂಧ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮದೊಂದು ಉತ್ತರ