ಕ್ರೈಂ ವಾರ್ತೆ

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿಗಳಿಬ್ಬರಿಗೆ ಶಿಕ್ಷೆ

ಬೆಳ್ತಂಗಡಿ : ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅಂತಿಮ ಹಾಗೂ ಮಹತ್ವದ ತೀರ್ಪುನ್ನು ನ್ಯಾಯಾಲಯ ಪ್ರಕಟಿಸಿದೆ.
ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಕೊಲೆಗೈದು ಹೋಮಕುಂಡದಲ್ಲಿ ಸುಟ್ಟಿರುವ ಆರೋಪ ಸಾಬೀತಾಗಿದ್ದು, ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ರಾಜೇಶ್ವರಿ ಗೆಳೆಯ ನಿರಂಜನ ಭಟ್ ಗೆ ಶಿಕ್ಷೆ ವಿಧಿಸಲಾಗಿದೆ.


ನಾಲ್ಕನೇ ಆರೋಪಿ ನಿರಂಜನ್ ಭಟ್ ತಂದೆ ಶ್ರೀನಿವಾಸ್ ಭಟ್ ಅನಾರೋಗ್ಯದಿಂದ ಮೃತಪಟ್ಟಿದ್ದು, ಐದನೇ ಆರೋಪಿ ಚಾಲಕ ರಾಘವೇಂದ್ರ ಖುಲಾಸೆಗೊಂಡಿದ್ದಾರೆ.

ಮೇ 31ರಂದು ಪ್ರಕಟವಾಗಬೇಕಿದ್ದ ಅಂತಿಮ ತೀರ್ಪನ್ನು ಕೋವಿಡ್ ಕಾರಣದಿಂ
ದಾಗಿ ಇಂದಿಗೆ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲ
ಯದ ನ್ಯಾಯಾಧೀಶ ಜೆ.ಎನ್.ಸುಬ್ರಹ್ಮಣ್ಯ ಮುಂದೂಡಿದ್ದರು. ಇಂದು ಪ್ರಕಟವಾಗಿರುವ ತೀರ್ಪಿನಲ್ಲಿ ಕೊಲೆ ಪ್ರಕರಣಕ್ಕೆ ಸಂಬಂಧಿ
ಸಿದಂತೆ ಮೂರು ಪ್ರಮುಖ ಆರೋಪಿಗಳು
ದೋಷಿಗಳೆಂದು ಸಾಬೀತಾಗಿದ್ದು, ಹಾಗೆಯೆ ಶಿಕ್ಷೆಯ ಪ್ರಮಾಣದ ಕುರಿತು ಮಧ್ಯಾಹ್ನದ ನಂತರ ಉಡುಪಿ ಜಿಲ್ಲಾ ನ್ಯಾಯಾಲಯ ಘೋಷಿಸಲಿದೆ.
ತೀರ್ಪು ನೀಡುವ ವೇಳೆ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿ ಹಾಗೂ ಸಾಕ್ಷ್ಯನಾಶ ಮಾಡಿದ ಆರೋಪ ಎದುರಿಸುತ್ತಿದ್ದ ರಾಘವೇಂದ್ರ ಹಾಜರಾಗಲು ಕೋರ್ಟ್ ಆದೇಶ ನೀಡಿತ್ತು. ಜೊತೆಗೆ ಜೈಲಿನಲ್ಲಿರುವ ಆರೋಪಿಗಳಾದ ನವನೀತ್ ಶೆಟ್ಟಿ ಮತ್ತು ನಿರಂಜನ್ ವಿಡಿಯೋ ಕಾನ್ಸರೆನ್ಸ್ ಮೂಲಕ ಹಾಜರಾಗುವಂತೆ ಸೂಚಿಸಿತ್ತು.
ಪ್ರಕಣದ ಹಿನ್ನೆಲೆ:
ಆರೋಪಿಗಳು 2016ರ ಜು.28ರಂದುಅಪರಾಹ್ನ
3 ಗಂಟೆಗೆ ಇಂದ್ರಾಳಿಯ ಮನೆಯಲ್ಲಿ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿ, ಬಳಿಕ ಮೃತದೇಹವನ್ನು ನಂದಳಿಕೆಯಲ್ಲಿರುವ ನಿರಂಜನ ಭಟ್ ಮನೆಯಲ್ಲಿನ ಹೋಮ ಕುಂಡದಲ್ಲಿ ಹಾಕಿ ಸುಟ್ಟಿದ್ದರು. ಜು.31ರಂದು ಭಾಸ್ಕರ್ ಶೆಟ್ಟಿ ತಾಯಿ ತನ್ನ ಮಗ ನಾಪತ್ತೆಯಾಗಿರುವುದಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ತನಿಖೆ ನಡೆಸಿದ ಪೊಲೀಸರಿಗೆಈ ಕೊಲೆ ಬೆಳಕಿಗೆ ಬಂತು. ಆ.7ರಂದು ಪತ್ನಿ ರಾಜೇಶ್ವರಿ ಹಾಗೂ ಮಗ ನವನೀತ್ ನನ್ನು ಮತ್ತು ಆ.8ರಂದು ನಿರಂಜನ್ ಭಟ್ ನನ್ನು ಪೊಲೀಸರು ಬಂಧಿಸಿದ್ದರು.

ನಿಮ್ಮದೊಂದು ಉತ್ತರ