ಬೆಳ್ತಂಗಡಿ: ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನನ್ನು ಕಾರಿನಲ್ಲಿ ಅಪಹರಿಸಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ 1ನೇ ಜಿಲ್ಲಾ ಹೆಚ್ಚುವರಿ ಜಿಲ್ಲಾ ನ್ಯಾಯಾಲದ ನ್ಯಾಯಾಧೀಶರು 6 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿಜು.28ರಂದು ಆದೇಶ ನೀಡಿದ್ದಾರೆ.
ನಾವೂರು ನಿವಾಸಿ ಆನಂದ ನಾಯ್ಕ (39), ಬೆಳ್ತಂಗಡಿ ಕಸಬಾ ನಿವಾಸಿ ಪ್ರವೀಣ್ ನಾಯ್ಕ (39), ಚಾರ್ಮಾಡಿ ನಿವಾಸಿ ವಿನಯ ಕುಮಾರ್ (34), ಮೂಡುಕೋಡಿ ನಿವಾಸಿ ಪ್ರಕಾಶ್ (35), ಬಂಟ್ವಾಳ ಪುದು ನಿವಾಸಿ ಲೋಕೇಶ್ (38), ಮೇಲಂತಬೆಟ್ಟು ನಿವಾಸಿ ನಾಗರಾಜ (43)
ಜೀವಾವಧಿ ಶಿಕ್ಷೆಗೆ ಒಳಗಾದಆರೋಪಿಗಳು.
ಮಲವಂತಿಗೆ ಗ್ರಾಮದ ದಿಡುಪೆ ನಿವಾಸಿ ಸುರೇಶ್ ನಾಯ್ಕ (30)ಈಪ್ರಕರಣದಲ್ಲಿಕೊಲೆಯಾದವರು.
ಘಟನೆ ವಿವರ:
ನಾವೂರು ನಿವಾಸಿ ಆನಂದ ನಾಯ್ಕ ಎಂಬಾತನಿಗೆ ಮದುವೆಯಾಗಿ ಅದಾಗಲೇ ಮಕ್ಕಳಿದ್ದರು ಇದರ ಹೊರತಾಗಿಯೂ ಈತ ಪರಿಚಯದ ಯುವತಿಯನ್ನು ಪ್ರೀತಿಸುತ್ತಿದ್ದ. ಆ ಯುವತಿಯನ್ನು ಮದುವೆಯಾಗುವ ಹಠಕ್ಕೆ ಬಿ ದ್ದು, ಯುವತಿಯ ತಂದೆಯಲ್ಲಿ ವಿಷಯ ಪ್ರಸ್ತಾಪಿಸಿದ್ದ. ಆದರೆ ಯುವತಿ ಮನೆಯವರು ಇದಕ್ಕೆ ಒಪ್ಪಲಿಲ್ಲ .ಕೆಲವು ದಿನಗಳ ನಂತರ ದಿಡುಪೆ ನಿವಾಸಿ ಸುರೇಶ್ ನಾಯ್ಕ ಜತೆ ಯುವತಿಯ ಮದುವೆ ಸಂಬಂಧ ಕೂಡಿ ಬಂದಿತ್ತು. 2017ರ ಏಪ್ರಿಲ್ 30ರಂದು ನಿಶ್ಚಿತಾರ್ಥಕ್ಕೆ ದಿನ ನಿಗದಿಯಾಗಿತ್ತು. ಈ ವಿಷಯ ಆನಂದ ನಾಯ್ಕ ಗಮನಕ್ಕೆ ಬಂದಿದೆ. ಯುವತಿಯ ಮನೆಯವರಂದ ಸುರೇಶ್ ನಾಯ್ಕನ ಮೊಬೈಲ್ ನಂಬರ್ ಸಂಗ್ರಹಿಸಿ ‘ನೀನು ಮದುವೆಯಾಗುವ ಯುವತಿಯನ್ನು ನಾನು ಪ್ರೀತಿಸುತ್ತಿದ್ದು ಈ ಸಂಬಂಧವನ್ನು ಬಿಟ್ಟುಬಿಡು’ ಎಂದು ಒತ್ತಾಯಿಸಿದ್ದಾನೆ.
ಇದಕ್ಕೆ ಒಪ್ಪದಿದ್ದಾಗ ಸುರೇಶ್ ನಾಯ್ಕರಿಗೆ ಜೀವ ಬೆದರಿಕೆಯನ್ನೂ ಆರೋಪಿ ಹಾಕಿದ್ದಾನೆ
ಪೋನ್ ಮಾಡಿ ಕರೆಸಿ ಕರೆಸಿಕೊಂಡರು:
ನಂತರ 2017 ಜುಲೈ 29ರಂದು ಎರಡನೇ ಆರೋಪಿ ಪ್ರವೀಣ್ ನಾಯ್ಕ ಎಂಬಾತನು ಸುರೇಶ್ ಗೆ ಕರೆ ಮಾಡಿ ಆತ್ಮೀಯವಾಗಿ ಮಾತನಾಡಿ ‘ಗಂಗಾ ಕಲ್ಯಾಣ ಯೋಜನೆಯಡಿ ಹಣ ಸಿಗುವ ಬಗ್ಗೆ ಮಾಹಿತಿ ನೀಡಿದ್ದಲ್ಲದೆ, ಉಜಿರೆಗೆ ಬನ್ನಿ’ ಎಂದು ತಿಳಿಸಿದ್ದಾನೆ. ಅದರಂತೆ ಸುರೇಶ್ ನಾಯ್ಕ ಉಜಿರೆಗೆ ಬಂದಾಗ ಆರೋಪಿಗಳಾದ ಪ್ರವೀಣ್ ನಾಯ್ಕ ವಿನಯ್, ಪ್ರಕಾಶ್, ಲೋಕೇಶ್, ನಾಗರಾಜ್ ಒಟ್ಟು ಸೇರಿ ನಾಗರಾಜ್ ರ ಮಾರುತಿಓಮ್ಮಿಯಲ್ಲಿ ಸುರೇಶ್ ರನ್ನು ಪಟ್ರಮೆ ಧರ್ಮಸ್ಥಳರಸ್ತೆಯಲ್ಲಿ ಕರೆದುಕೊಂಡು ಹೋಗಿದ್ದಾರೆ. ಈ ಸಂದರ್ಭ ಯುವಕನಲ್ಲಿ ಮದುವೆ ನಿರಾಕರಿಸಲು ತಂಡ ಒತ್ತಡ ಹಾಕಿದ್ದು, ಇದಕ್ಕೆ ಒಪ್ಪದಿದ್ದಾಗ ಕುತ್ತಿಗೆಗೆ ಹಗ್ಗದಿಂದ ಬಿಗಿದು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.
ಪೆಟ್ರೋಲ್ ಹಾಕಿ ಸುಟ್ಟರು:ನಂತರ ಆನಂದ್ ನಾ ಯ್ಕ ಸೇರಿ ಧರ್ಮಸ್ಥಳದ ಅಲೆಕ್ಕಿಯ ತಗ್ಗುಪ್ರದೇಶದಲ್ಲಿ ಮೃತದೇಹಕ್ಕೆ ಗೋಣಿ ಚೀಲವನ್ನು ಸುತ್ತಿ ಪೆಟ್ರೋಲ್ ಹಾಕಿ ಗುರುತು ಸಿಗದಂತೆ ಸುಟ್ಟು ಹಾಕಿದ್ದಾರೆ. ಮೃತಪಟ್ಟ ವ್ಯಕ್ತಿಯ ಸೊತ್ತುಗಳನ್ನು ಕೊಯ್ಯೂರು ಕಟ್ಟ ಎಂಬಲ್ಲಿ ಮೋರಿಯ ಕೆಳಗೆ ಸುಟ್ಟು ಹಾಕಿ
ದ್ದರು.
ಪ್ರಕರಣ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಆರು ಮಂದಿ ಆರೋಪಿಗಳನ್ನು ಮೇ 4ರಂದುಬಂಧಿಸಲಾಗಿತ್ತುಕೊಲೆಯಾದವನ ಪ್ಯಾಂಟ್ ಬೆಲ್ಟ್ ಮೂಲಕ ಯುವಕನ ಪಕ್ಕದ ಮನೆಯ ಬಾಲಕನಿಂದ ಈ ಪ್ರಕರಣವನ್ನು ಪೊಲೀಸರು ಬೇಧಿಸಿದ್ದರು.
ಪ್ರಕರಣದ ಸಮಗ್ರ ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಆರೋಪ ಸಾಬೀತು
ಆಗಿದೆ ಎಂದು ತೀರ್ಪು ನೀಡಿ ,
ಆರೋಪಿಗಳಿಗೆ ಐಪಿಸಿ ಸೆಕ್ಷನ್ 302 ರಂತೆ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ, ಸೆಕ್ಷನ್ 120 ಬಿ’ಯಂತೆ ಜೀವಾವಧಿ ಶಿಕ್ಷೆ ಹಾಗೂ 5 ಸಾವಿರ ರೂಪಾಯಿ ದಂಡ , ಐಪಿಸಿ 201ರಂತೆ 3 ವರ್ಷ ಜೈಲು ಶಿಕ್ಷೆ, 143 ಐಪಿಸಿಯಂತೆ 3 ತಿಂಗಳು ಜೈಲು ಶಿಕ್ಷೆ, 147 ಐಪಿಸಿ ಯಂತೆ 1 ವರ್ಷ ಜೈಲು ಶಿಕ್ಷೆ ,148 ಐಪಿಸಿಯಂತೆ 3 ವರ್ಷ ಜೈಲು ಶಿಕ್ಷೆ ಹಾಗೂ ಸುರೇಶ್ ನಾಯ್ಕ್ ಕುಟುಂಬಕ್ಕೆ 1ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶ ನೀಡಿದೆ. ಪ್ರಕರಣದಲ್ಲಿ 33 ಮಂದಿ ಸಾಕ್ಷಿ ವಿಚಾರಣೆ ನಡೆಸಲಾಗಿದೆ.
ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ರವೀಶೈ.ಆರ್ ನೇತೃತ್ವದಲ್ಲಿ ಬೆಳ್ತಂಗಡಿ ಆಗಿನ ಸರ್ಕಲ್ ಇನ್ಸೆಕ್ಟರ್ ನಾಗೇಶ್ ಕದ್ರಿ, ಪ್ರವೀಣ್ ದೇವಾಡಿಗ, ವೆಂಕಟೇಶ್ ನಾಯ್ಕ ಬೆನ್ನಿಚನ್, ಪ್ರಮೋದ್ ನಾಯ್ಕ, ಬಿಜು ತಾಂತ್ರಿಕ ವಿಭಾಗದ ದಿವಾಕರ್, ಸಂಪತ್,ತಾರಾನಾಥ್ ಭಾಗಿಯಾಗಿದ್ದರು.