ಬೆಳ್ತಂಗಡಿ: ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಸಂತೋಷ್ ಕುಮಾರ್ ಲಾಯಿಲ ಇವತ್ತು ಬೆಳಿಗ್ಗೆ ಹತ್ತು ಗಂಟೆ ಸುಮಾರಿಗೆ ಲಾಯಿಲ್ ಗ್ರಾಮದ ಆದರ್ಶನಗರದ ಸರ್ಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಇವರು ಕಳೆದ ಒಂದು ವರುಷ ಬೆಳ್ತಂಗಡಿ ನಗರದ ಸಮೀಪ ನಡೆದ ಅಪಘಾತದಲ್ಲಿ ಬೆನ್ನು ಮೂಳೆ ಮುರಿತಕ್ಕೊಳಗಾಗಿ ಮಾನಸಿಕವಾಗಿ
ಅಘಾತಕ್ಕೊಳಗಾಗಿದ್ದರು ಈ ಅಘಾತದಿಂದಲೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಬೆಳ್ತಂಗಡಿ ಅಗ್ನಿ ಶಾಮಕ ಇಲಾಖೆಯ ಸಿಬ್ಬಂದಿಗಳು ಮೃತ ದೇಹವನ್ನು ಮೆಲೆತ್ತಿದ್ದಾರೆ ಎಂದು ತಿಳಿದು ಬಂದಿದೆ.