ಪುತ್ತೂರು: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಪಾದೆಕರ್ಯದ ಕೃಷಿಕ ದಂಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.18 ರಂದು ವರದಿಯಾಗಿದೆ.
ಸುಬ್ರಹ್ಮಣ್ಯ ಭಟ್ (84)ಮತ್ತು ಅವರ ಪತ್ನಿ ಶಾರದಾ ಭಟ್ (78) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಇಬ್ಬರೂ ಭಾನುವಾರ ರಾತ್ರಿ ಊಟ ಮಾಡಿ ಮನೆಯ ಕೆಳಗಿನ ಅಂತಸ್ತಿನ ಕೋಣೆಯಲ್ಲಿ ಮಲಗಿದ್ದರು. ಪುತ್ರ, ಅವರ ಪತ್ನಿ ಮತ್ತು ಮಕ್ಕಳು ಮಹಡಿಯ ಕೋಣೆಯಲ್ಲಿ ಮಲಗಿದ್ದರು. ಪುತ್ರ ಸೋಮವಾರ ಬೆಳಿಗ್ಗೆ ಎದ್ದು ನೋಡಿದಾಗ ದಂಪತಿ ಪ್ರತ್ಯೇಕ ಕೋಣೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಪ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.