ವೇಣೂರು : ನದಿಗೆ ಹೋಗಿದ್ದ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಅ.27ರಂದು ಮಧ್ಯಾಹ್ನ ನಡೆದಿದೆ.
ವೇಣೂರು ಜನತಾ ಕಾಲೋನಿ ನಿವಾಸಿ, ವೇಣೂರಿನ ಶ್ರೀನಿಧಿ ಎಂಟರ್ ಪ್ರೈಸಸ್‌ನ ಉದ್ಯೋಗಿ ಚಂದ್ರಶೇಖರ [25.ವ] ಈ ದುರ್ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಸ್ಥಳೀಯ ಫಲ್ಗುಣಿ ನದಿಗೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ಜಾರಿ ಬಿದ್ದು, ಅವರು ನೀರಿನಲ್ಲಿ ಮುಳುಗಿ ಮೃತಪಟ್ಟರೆನ್ನಲಾಗಿದೆ. ಘಟನೆ ತಿಳಿಯುತ್ತಿದ್ದಂತೆ ಅಂಗಡಿ ಮಾಲಕರು ಹಾಗೂ ಸ್ಥಳೀಯರು ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದರು.ನಂತರ ಮುಳುಗು ತಜ್ಞರು ಹಾಗೂ ಅಗ್ನಿಶಾಮಕ ದಳದವರ ಸೂಕ್ತ ಕಾರ್ಯಾಚರಣೆಯಿಂದ ಯುವಕನ ಶವ ನದಿ ನೀರಿನಲ್ಲಿ ಪತ್ತೆಯಾಗಿದೆ.
ವೇಣೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈತನ ತಂದೆ ತಾಯಿ ಹಲವು ವರ್ಷಗಳ ಹಿಂದೆ ಮೃತಪಟ್ಟಿದ್ದು, ಮನೆಯಲ್ಲಿ ಒಬ್ಬನೇ ವಾಸ್ತವ್ಯವಿದ್ದನು ಎಂದು ಹೇಳಲಾಗಿದೆ.