ಬೆಳ್ತಂಗಡಿ : ಹಾಡು ಹಗಲೇ ಇಂದಬೆಟ್ಟುವಿನ ಮನೆಯೊಂದರಿಂದ ರೂ.5,2೦೦ ನಗದು ಸಹಿತು ನಗದು ಸಹಿತ ರೂ.1205,2೦೦ ಮೌಲ್ಯದ 40ಪವನ್ ಚಿನ್ನಾಭರಣ ಕಳವು ನಡೆಸಿದ ಪ್ರಕರಣದ ತನಿಖೆ ನಡೆಸಿ ತೀವ್ರ ಶೋಧ ನಡೆಸಿದ ಬೆಳ್ತಂಗಡಿ ಪೊಲೀಸರು ಮೂರು ಮಂದಿ ಆರೋಪಿಗಳನ್ನು ಬಂಧಿಸಿ, ಕಳವಾದ ನಗದು ಸಹಿತ ಚಿನ್ನಾಭರಣಗಳನ್ನು
ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ನಾವೂರು ಗ್ರಾಮದ ನಿರಿಂದಿ ಮನೆ ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಪುತ್ರ ಮಹಮ್ಮದ್ ಸ್ವಾಲಿ ( 26 ವರ್ಷ),
ಲಾಯಿಲ ಗ್ರಾಮದ ಕುಂಟಿನಿ ಮನೆ ಅಬ್ಬಾಸ್ ಎಂಬರ ಪುತ್ರ ಯಾಹ್ಯಾ ( 32 ವರ್ಷ), ನಾವೂರು ಗ್ರಾಮದ ಕಿರ್ನಡ್ಕ ನಿವಾಸಿ ಹುಸೈನ್ ಎಂಬವರ ಪುತ್ರ ಬಿ.ಹೆಚ್ ನೌಫಲ್ (27 ವರ್ಷ) ಬಂಧಿತ ಆರೋಪಿಗಳಾಗಿದ್ದಾರೆ.
ಘಟನೆ ವಿವರ: ಅ.31ರಂದು ಇಂದಬೆಟ್ಟು ಗ್ರಾಮದ ಬಂಗಾಡಿ ದೇರಾಜೆ ಮನೆ ನಿವಾಸಿ ಮಹಮ್ಮದ್ ಎಂಬವರ ಮನೆಯಿಂದ ಮನೆಯಲ್ಲಿ ಯಾರೂ ಇಲ್ಲದ ಸಮಯ ಯಾರೋ ಕಳ್ಳರು ಮನೆಗೆ ನುಗ್ಗಿ ಮನೆಯ ಗೋದ್ರೇಜ್ ನಲ್ಲಿಟ್ಟಿದ್ದ ಐದು ಪವನಿನ ಚಿನ್ನದ ಚೈನ್ 1, ಒಂದು ವವನಿನ ಚಿನ್ನದ ಸಣ್ಣ ಚೈನ್ 1, ಮಕ್ಕಳ ಚೈನ್ 2, ತಲಾ ಒಂದು ಒಂದು ವವನಿನ ಚಿನ್ನದ ಕಾಯಿನ್ಸ್ 4 , ತಲಾ ನಾಲ್ಕು ಪವನಿನ ಚಿನ್ನದ ಬಿಸ್ಕಟ್ 4, ಎರಡು ವವನಿನ ಚಿನ್ನದ ಗಟ್ಟಿ 1, 13ಪವನಿನ ಚಿನ್ನದ ನೆಕ್ಲೀಸ್ 1, ಒಂದು
ಒಂದೂವರೆ ಪವನಿನ ಚಿನ್ನದ ವವನಿನ ಚಿನ್ನದ ತುಂಡಾದ ಬಳ ಹಾಗೂ ಪೆಂಡೆಂಟ್ 1, ಅರ್ಧ ಪವನಿನ ಚಿನ್ನದ ಮಗುವಿನ ಕಿವಿ ಓಲೆ 1, ಅರ್ಧ ಪವನಿನ ಚಿನ್ನದ ಬ್ರಾಸ್ ಲೈಟ್ 1, ಸೇರಿದಂತೆ ಸುಮಾರು 12,05,200ರೂಪಾಯಿ ಮೌಲ್ಯದ ವಿವಿಧ ರೀತಿಯ 40 ಪವನ್ ಚಿನ್ನಾಭರಣಗಳು ಮತ್ತು ನಗದು ಹಣ 5200 ರೂಪಾಯಿ ಕಳವು ಮಾಡಿದ್ದರು. ಈ ಮಹಮ್ಮದ್ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತೀವ್ರ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಇಂದಬೆಟ್ಟು ಗ್ರಾಮಕ್ಕೆ ಅಂದು ಬಂದ ಅಪರಿಚಿತರ ಮಾಹಿತಿ ಕಲೆ ಹಾಕಿದಾಗ ಬೈಕ್‌ನಲ್ಲಿ ಹೆಲ್ಮೆಟ್ ಹಾಕಿ ಇಬ್ಬರು ಬಂದಿರುವ ಮಾಹಿತಿ ಲಭಿಸಿತು. ಇದರ ಬಗ್ಗೆ ಸಿಸಿ ಟಿ.ವಿ ಹಾಗೂ ಇತರ ಮೂಲಗಳಿಂದ ಮಾಹಿತಿ ಕಲೆ ಹಾಕಿ ಇದೀಗ ಮೂರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳ ಪತ್ತೆಗಾಗಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸೋನವನೆ ಋಷಿಕೇಶ್ ಭಗವಾನ್, ಶಿವಕುಮಾರ್ ಗುಣಾರೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ರವರುಗಳ ನಿರ್ದೇಶನದಂತ, ಶಿವಾಂಶು ರಜಪೂತ್ ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರುರವರ ಸೂಚನೆಯಂತೆ ಈ ಪ್ರಕರಣದ ತನಿಖಾಧಿಕಾರಿಯಾದ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಶಿವಕುಮಾರ ಬಿ, ಬೆಳ್ತಂಗಡಿ ಪೊಲೀಸ್ ಠಾಣಾ ಪಿ.ಎಸ್.ಐ ನಂದ ಕುಮಾರ್, ಪ್ರೊ.ಪಿಎಸ್‌ಐ ಮೂರ್ತಿ, ಎಎಸೈ ದೇವಪ್ಪ ಎಂಕೆ, ಸಿಬ್ಬಂದಿಗಳಾದ ಲಾರೆನ್ಸ್ ರಾಜೇಶ್ ಎನ್, ವೃಷಭ, ಪ್ರಮೋದ್ ನಾಯ್ಕ, ಇಬ್ರಾಹಿಂ ಗರ್ಡಾಡಿ,ಲತೀಫ್, ವಿಜಯ ಕುಮಾರ್ ರೈ, ವೆಂಕಟೇಶ್, ಬಸವರಾಜ್, ಚರಣ್, ಅವಿನಾಶ್, ವಾಹನ ಚಾಲಕರಾದ ಮಹಮ್ಮದ್ ಆಸೀಫ್, ಸತೀಶ್, ತಾಂತ್ರಿಕ ಸಿಬ್ಬಂದಿಗಳಾದ ದಿವಾಕರ, ಸಂಪತ್ ಕುಮಾರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಆರೋಪಿಗಳು ಕೃತ್ಯಕ್ಕೆ ಉಪಯೋಗಿಸಿದ ಕೆಎ. 21 ಎಂ 8476ನೇ ಅಲ್ಲೋ ಕಾರು, ಪಲ್ಸರ್ ಎನ್ ಎಸ್ ಮೋಟಾರು ಸೈಕಲ್, ನಾಲ್ಕು ಮೊಬೈಲ್ ಹ್ಯಾಂಡ್ ಸೆಟ್ ಇವುಗಳ ಒಟ್ಟು ಮೌಲ್ಯ 1,96,500 ರೂಗಳು,, ಹಾಗೂ ಕಳವಾದ 12,05,200 ರೂಪಾಯಿ ಮೌಲ್ಯದ 320 ಗ್ರಾಂ ಚಿನ್ನಾಭರಣಗಳು, ನಗದು 1230 ರೂ ಗಳನ್ನು ಸ್ವಾಧೀನಪಡಿಸಿಕೊಂಡು, ಸ್ವಾಧೀನ ಪಡಿಸಿಕೊಂಡ ಸ್ವತ್ತುಗಳ ಒಟ್ಟು ಮೌಲ್ಯ 12,75,930ರೂಪಾಯಿ ಆಗಿದ್ದು, ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣವನ್ನು ಶೀಘ್ರವಾಗಿ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರಿಗೆ ದ.ಕ ಜಿಲ್ಲಾ ಎಸ್.ಪಿಯವರು ವಿಶೇಷ ಬಹುಮಾನ ಘೋಷಿಸಿದ್ದಾರೆ.