ಬೆಳ್ತಂಗಡಿ: ಇಲ್ಲಿಯ ಮುದ್ದಾಡಿ ಬಳಿ 407 ಟೆಂಪೊ ಹಾಗೂ ದ್ವಿಚಕ್ರ ವಾಹನ ಪರಸ್ಪರ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿ, ಬೈಕ್ ಸವಾರ ಉಪನ್ಯಾಸಕ ಪ್ರದೀಪ್ ಭಟ್ ಅಪಾಯದಿಂದ ಪಾರಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಪಿಲಾತಬೆಟ್ಟು ಗ್ರಾಮದ ನಯನಾಡು ಮಿತ್ತೊಟ್ಟು ನಿವಾಸಿ, ಮೂಡಬಿದಿರೆ ರೋಟರಿ ಪಿಯು ಕಾಲೇಜಿನ ಸಂಸ್ಕೃತ ಉಪನ್ಯಾಸಕ ಪ್ರದೀಪ ಭಟ್(28.ವ) ಎಂಬವರೇ ಅಪಘಾತದಲ್ಲಿ ಗಾಯಗೊಂಡವರಾಗಿದ್ದಾರೆ.
ಪ್ರದೀಪ್ ಭಟ್ ರವರು ತಮ್ಮ ಬೈಕ್ ನಲ್ಲಿ ನಯನಾಡು ಕಡೆಯಿಂದ ಮೂಡಬಿದ್ರೆಗೆ ತೆರಳುತ್ತಿರುವ ಸಂದರ್ಭದಲ್ಲಿ ವೇಣೂರು ಸಮೀಪದ ಕಾಮೆಟ್ಟು ಬಳಿಯ ತಿರುವಿನಲ್ಲಿ ಎದುರಿನಿಂದ ಬಂದ 407 ಟೆಂಪೋ ಪರಸ್ಪರ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ರಸ್ತೆಗೆಸೆಯಲ್ಪಟ್ಟು ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಟೆಂಪೋ ಅಡಿಗೆ ಸಿಲುಕಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಬೈಕ್ ಸವಾರ ಹೆಲ್ಮೆಟ್ ಧರಿಸಿರುವ ಕಾರಣ ಅಪಾಯದಿಂದ ಪಾರಾಗಿದ್ದಾರೆ.ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.