ಪದ್ಮಂಜ: ಚಿಂತಕ ಅಂಬೇಡ್ಕರ್ ವಾದಿ ದಲಿತ ಮುಖಂಡ ಪಿ.ಡೀಕಯ್ಯ ಅವರ ಸಾವು ಅಸಹಜ ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿ ದೂರು ನೀಡಿದ ಹಿನ್ನೆಲೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ಹೊರತೆಗೆಯುವ ಪ್ರಕ್ರಿಯೆ ಬೆಳ್ತಂಗಡಿ ತಾಲೂಕಿನ ಪದ್ಮುಂಜದಲ್ಲಿ ನಡೆದಿದೆ.
ಜು. 8 ರಂದು ಮಿದುಳಿನ ರಕ್ತಸ್ರಾವದಿಂದ ಅವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿತ್ತು.
ಕುಟುಂಬಸ್ಥರು ಈ ಬಗ್ಗೆ ಅನುಮಾನ ವ್ಯಕ್ತಪಡಿಸಿ ಈ ಬಗ್ಗೆ ದೂರು ನೀಡಿರುವ ಹಿನ್ನಲೆಯಲ್ಲಿ
ಪೊಲೀಸ್ ಇಲಾಖೆ, ತನಿಖೆಗೆ ಮುಂದಾಗಿದೆ.ಬೆಳ್ತಂಗಡಿ ತಹಶೀಲ್ದಾರ್, ಹಿರಿಯ ಪೊಲೀಸ್ ಅಧಿಕಾರಿ,ಆರೋಗ್ಯ ಇಲಾಖೆ ಅಧಿಕಾರಿಗಳು ಅವರ ಮೃತ ದೇಹದ ಅಂತ್ಯ ಸಂಸ್ಕಾರ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದು ಮರಣೋತ್ತರ ಪರೀಕ್ಷೆಗಾಗಿ ಹೊಳಲಾಗಿರುವ ಮೃತ ದೇಹವನ್ನು ಹೊರತೆಗೆಯುವ ಪ್ರಕ್ರಿಯೆ ನಡೆಸುತ್ತಿದ್ದಾರೆ.