ಕ್ರೈಂ ವಾರ್ತೆ

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ದೇವರ ಚಿನ್ನಭಾರಣವನ್ನು ಕಳವು

ಬೆಳ್ತಂಗಡಿ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಳೆದ ರಾತ್ರಿ ಕಳ್ಳರು ನುಗ್ಗಿ ದೇವರ ಚಿನ್ನಭಾರಣವನ್ನು ಕಳವುಗೈದಿದ್ದಾರೆ.

ಇಂದು ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ದೇವರ ಚಿನ್ನಾಭರಣ, ಬೆಳ್ಳಿಯ ವಸ್ತುಗಳು ಕಳವು ಆಗಿದ್ದು ಸುಮಾರು 4.5 ಲಕ್ಷ ರೂಪಾಯಿ ಅಂದಾಜಿಸಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯವರು ಮಾಹಿತಿ ನೀಡಿದ್ದಾರೆ.ಕಳೆದ ಕೆಲ ತಿಂಗಳುಗಳ ಹಿಂದೆ ದೇವಸ್ಥಾನದ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆದಿತ್ತು. ಬೆಳ್ತಂಗಡಿ ಪೋಲೀಸರು ಪರಿಶೀಲನೆ ನಡೆಸಿದ್ದಾರೆ.

ನಿಮ್ಮದೊಂದು ಉತ್ತರ