ಬೈಂದೂರು: ತಾಲೂಕಿನ ಕಾಲ್ನೋಡು ಗ್ರಾಮದಲ್ಲಿ. ಕಾಲು ಸಂಕ ದಾಟುವಾಗ ಆಕಸ್ಮಿಕವಾಗಿ ಬಿದ್ದು,
ನೀರುಪಾಲಾಗಿದ್ದ ಬಾಲಕಿ ಸನ್ನಿಧಿ ಮೃತದೇಹ ಇಂದು ಸಂಜೆ ಪತ್ತೆಯಾಗಿದೆ
ನೀರುಪಾಲಾಗಿದ್ದ ಬಾಲಕಿ ಸನ್ನಿಧಿಗಾಗಿ ಕಳೆದ ಎರಡು ದಿನಗಳಿಂದ ಅಗ್ನಿಶಾಮಕ ದಳ ಮೀನುಗಾರರು ಮತ್ತು ಸ್ಥಳೀಯರಿಂದ ಶೋಧಕಾರ್ಯ ನಡೆಯುತ್ತಿತ್ತು.
ಇಂದು (ಆಗಸ್ಟ್ 10) ಸನ್ನಿಧಿ ಕಾಲು ಜಾರಿಬಿದ್ದ ಸ್ಥಳದಲ್ಲೇ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಇಂದು ಭೇಟಿ ನೀಡಿದ್ದ ಉಸ್ತುವಾರಿ ಸಚಿವ ಅಂಗಾರ ಮೃತ ಬಾಲಕಿಯ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಿದ್ದಾರೆ.