ಮಂಗಳೂರು; ಹೆಚ್ಚೇನು ಕಡಿದು ಗಂಭೀರ ಗಾಯಗೊಂಡಿದ್ದ ಯುವಕ ಸಾವನ್ನಪ್ಪಿರುವ ಘಟನೆ ಕಾಪು ಉಳ್ಳಾಲದಲ್ಲಿ ನಡೆದಿದೆ. ಉಳ್ಳಾಲ ಬೈಲು ನಿವಾಸಿ ಜಿತನ್ ರೆಸ್ಕಿನ (38) ಮೃತಪಟ್ಟವರು.
ಜಿತನ್ ಅವರು ಮಂಗಳವಾರ ಬೆಳಗ್ಗೆ ಉಳ್ಳಾಲ ಬೈಲಿನ ಭವಾನಿ ಎಂಬವರ ಮನೆಯಲ್ಲಿ ಮರವೇರುವ ಯಂತ್ರದ ಮೂಲಕ ತೆಂಗಿನಕಾಯಿ ಕೀಳುತ್ತಿದ್ದರು. ಈ ವೇಳೆ ತೆಂಗಿನಲ್ಲಿ ಗೂಡು ಕಟ್ಟಿದ್ದ ನೂರಕ್ಕೂ ಅಧಿಕ ಹೆಚ್ಚೇನು ಹುಳಗಳು ದಾಳಿ ನಡೆಸಿ ಕಚ್ಚಿ ಗಾಯಗೊಳಿಸಿದ್ದವು. ಗಂಭೀರ ಗಾಯಗೊಂಡಿದ್ದ ಜಿತನ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಕೊ ನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.