ಕ್ರೈಂ ವಾರ್ತೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿಗೆ ಯತ್ನ : ಫರಂಗಿಪೇಟೆಯ ಪುದು‌ ಬಳಿ‌ ಘಟನೆ

ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ದುಷ್ಕರ್ಮಿಗಳ ತಂಡವೊಂದು ದಾಳಿಗೆ ಯತ್ನಿಸಿದ ಘಟನೆ ಅ. 13ರ  ನಿನ್ನೆ ತಡ ರಾತ್ರಿ  ಫರಂಗಿಪೇಟೆ ಬಳಿ ನಡೆದಿದೆ.

ಹರೀಶ್ ಪೂಂಜಾ ಅವರು ಮಂಗಳೂರು ವಿಮಾನ ನಿಲ್ದಾಣದಿಂದ ಬೆಳ್ತಂಗಡಿಗೆ ಬರುತ್ತಿದ್ದ  ವೇಳೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಬಳಿ ಸ್ಕಾರ್ಪಿಯೋ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಶಾಸಕರ ಕಾರನ್ನು ‌‌ಹಾಗೂ ಅದರ ಹಿಂದೆ ಇದ್ದ ಕಾರನ್ನು ಅಡ್ಡಗಟ್ಟಿ ದಾಳಿಗೆ ಯತ್ನ  ನಡೆಸಿದೆ.

ಶಾಸಕರು ತಮ್ಮ ಕಾರನ್ನು ಬಿಟ್ಟು  ಸಂಬಂಧಿಯೋರ್ವರ ಕಾರಿನಲ್ಲಿ  ಬರುತ್ತಿದ್ದ ರು.ಶಾಸಕರ ಅಧಿಕೃತ ಕಾರು ಆ ಕಾರನ್ನು ಹಿಂದಿನಿಂದ ‌‌‌‌‌‌‌‌‌‌‌‌‌‌‌‌‌‌‌‌‌‌‌‌‌     ಬರುತ್ತಿತ್ತು   ಹರೀಶ್ ಪೂಂಜಾ ಅವರ ಅಧಿಕೃತ ವಾಹನ ಚಾಲಕ ಶಾಸಕರ ಕಾರನ್ನು ಚಲಾಯಿಸುತ್ತಿದ್ದ ರು.   ಈ ಕಾರನ್ನು ತಡೆಗಟ್ಟಿದ ದುಷ್ಕರ್ಮಿಗಳು ಅವಾಚ್ಯ ಶಬ್ದಗಳಿಂದ ಬೈದು, ತಲವಾರು ಝಳಪಿಸಿ ಪರಾರಿಯಾಗಿದ್ದಾರೆ. ಶಾಸಕರು ತಮ್ಮ ಕಾರಿನಲ್ಲಿ ಇರದೇ ಇರುವುದರಿಂದ ಭಾರೀ ಅನಾಹುತ ತಪ್ಪಿದೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶಾಸಕ ಪೂಂಜಾ ಕಾರು ಚಾಲಕ ನವೀನ್ ದೂರು ನೀಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮದೊಂದು ಉತ್ತರ