ಕ್ರೈಂ ವಾರ್ತೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ  ಕಾರು ಹಿಂಬಾಲಿಸಿ ಬೆದರಿಕೆ ಪ್ರಕರಣ – ಕಾರು ಸಹಿತ ಆರೋಪಿಯ ಬಂಧನ

ಬೆಳ್ತಂಗಡಿ : ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರ ಕಾ‌ರನ್ನು ಹಿಂಬಾಲಿಸಿ ಕೊಲೆ ಬೆದರಿಕೆ ಒಡ್ಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಕಾರು ಸಹಿತ  ಪೋಲಿಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ರಿಯಾಝ್ ತಂದೆ ಅಬ್ದುಲ್ ಖಾದರ್, ಪ್ರಾಯ-38 ವರ್ಷ, ಮಂಗಳೂರು ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಭಾಗಿಯಾಗಿದ್ದ ಸ್ಕಾರ್ಪಿಯೋ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ ದೂರುದಾರರಾದ ಶಾಸಕರ ಚಾಲಕ ನವೀನ್ ಅವರು ಆರೋಪಿ ಮತ್ತು ವಾಹನವನ್ನು ಗುರುತಿಸಿದ್ದಾರೆ.
ಆರೋಪಿಯ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳು ದಾಖಲಾಗಿಲ್ಲ ಮತ್ತು ಆತನ ಬಳಿ ಯಾವುದೇ ಆಯುಧ ಪತ್ತೆಯಾಗಿಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಹೃಷಿಕೇಶ್ ಭಗವಾನ್ ಸೋನಾವಣೆ ಮಾಹಿತಿ ನೀಡಿದ್ದಾರೆ.

ನಿಮ್ಮದೊಂದು ಉತ್ತರ