ಕ್ರೈಂ ವಾರ್ತೆ

ಗೂಡ್ಸ್ ಟೆಂಪೋ ಡಿಕ್ಕಿ ದ್ವಿಚಕ್ರ ಸವಾರ ಬೀಟಿಗೆ ಪುರುಷೋತ್ತಮ ಪೂಜಾರಿ ಸಾವು

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ತರಕಾರಿ ಸಾಗಾಟದ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಡಿ 25 ಸಂಜೆ ಕಾಶಿಬೆಟ್ಟು ಎಂಬಲ್ಲಿ ನಡೆದಿದೆ.

ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ , ತರಕಾರಿ ಖಾಲಿ ಮಾಡಿ ವಾಪಸ್ ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದ ವಾಹನ ಡಿಕ್ಕಿ ಹೊಡೆದಿದೆ.‌ಈ ವೇಳೆ ರಸ್ತೆಗೆಸೆಯಲ್ಪಟ್ಟು ಸವಾರ ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಬೀಟಿಗೆ ನಿವಾಸಿ ಅಣ್ಣಿ ಪೂಜಾರಿಯ ಪುತ್ರ ವೃತ್ತಿಯಲ್ಲಿ ಫೈಂಟರ್ ಕೆಲಸ ಮಾಡುತ್ತಿದ್ದ ಪುರುಷೋತ್ತಮ ಪೂಜಾರಿ(20) ಸಾವನ್ನಪ್ಪಿದವನು ಎಂದು ಗುರುತಿಸಲಾಗಿದೆ. ಶವವನ್ನು ಬೆಳ್ತಂಗಡಿ ಶವಗಾರಕ್ಕೆ ಸಾಗಿಸಲಾಗಿದ್ದು. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮದೊಂದು ಉತ್ತರ