ಬೆಳ್ತಂಗಡಿ : ಖ್ಯಾತ ಯಕ್ಷಗಾನ ಕಲಾವಿದ, ವಿಮರ್ಶಕ, ಸಂಘಟಕ, ಕುರಿಯ ವಿಠಲ ಶಾಸ್ತ್ರಿ ಪ್ರತಿಷ್ಠಾನದ ಸಂಚಾಲಕ ಉಜಿರೆ ಅಶೋಕ್ ಭಟ್ಟ ಅವರಿಗೆ ಜು.1೦ರಂದು ವಾಮಂಜೂರಿನ ಪೆರ್ಮಂಕಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ನಡೆದ ಸಮಾರಂಭದಲ್ಲಿ `ಈಶಾವಾಸ್ಯ’ ಗೌರವ ಪ್ರಶಸ್ತಿಯನ್ನು ನೀಡಿ ಪುರಸ್ಕಾರಿಸಲಾಯಿತು.
ಕರ್ಣಾಟಕ ಬ್ಯಾಂಕ್ ಸಿಇಒ ಹಾಗೂ ಎಂ.ಡಿ ಮಹಾಬಲೇಶ್ವರ ಎಂ.ಎಸ್. ಅವರು ಉಜಿರೆ ಅಶೋಕ ಭಟ್ಟರಿಗೆ ಈಶಾವಾಸ್ಯ ಪುರಸ್ಕಾರ ಪ್ರದಾನ ಮಾಡಿ, ಕರ್ಣಾಟಕ ಬ್ಯಾಂಕ್ ಅಧಿಕಾರಿ, ಲೇಖಕ, ಕಲಾವಿದ ಕೃಷ್ಣಪ್ರಕಾಶ್ ಉಳಿತ್ತಾಯ ಬರೆದ ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಕಾಶಿಸಿದ ಸುಘಾತ ಪುಸ್ತಕ ಹಾಗೂ ಕರ್ಣಾಟಕ ಬ್ಯಾಂಕ್ ಉದ್ಯೋಗಿ, ಲೇಖಕಿ ವಿಭಾ ಕೃಷ್ಣಪ್ರಕಾಶ ಉಳಿತ್ತಾಯ ಬರೆದ, ಸಾಧನಾ ಪ್ರಕಾಶನ ಹೊರತಂದ ಹೋಗೋಣ ಜಂಬೂ ಸವಾರಿ ಪುಸ್ತಕಗಳನ್ನು ಅನಾವರಣಗೊಳಿಸಿದರು.
ವಿಮರ್ಶಕ ಡಾ| ಎಂ. ಪ್ರಭಾಕರ ಜೋಷಿ ಅಧ್ಯಕ್ಷತೆ ವಹಿಸಿದ್ದರು. ಚಿಂತಕ ಲಕ್ಷ್ಮೀಶ ತೋಳ್ಪಾಡಿ ವಿಶೇಷ ಅಭ್ಯಾಗತರಾಗಿದ್ದರು.ಕೃಷ್ಣಪ್ರಕಾಶ ಉಳಿತ್ತಾಯ, ವಿಭಾ ಕೃಷ್ಣ ಪ್ರಕಾಶ ಉಳಿತ್ತಾಯ ಉಪಸ್ಥಿತಿ ಇದ್ದರು.