ಜಿಲ್ಲಾ ವಾರ್ತೆ

ದ.ಕ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಯೋಗೀಶ್ ಸುವರ್ಣ ಕೋಡ್ಲಕ್ಕೆ ನೇಮಕ

ಬೆಳ್ತಂಗಡಿ: ದ.ಕ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಮಡಂತ್ಯಾರು ಗ್ರಾಮ ಪಂಚಾಯತದ ಮಾಜಿ ಸದಸ್ಯರಾಗಿರುವ ಯೋಗೀಶ್ ಸುವರ್ಣ ಕೋಡ್ಲಕ್ಕೆ ಇವರು ನೇಮಕಗೊಂಡಿದ್ದಾರೆ.


ದ.ಕ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ನೂತನ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್‌ರವರು ಈ ನೇಮಕಾತಿಯನ್ನು ಮಾಡಿ ಆದೇಶಿಸಿದ್ದಾರೆ. ಇವರ ಆಯ್ಕೆಗೆ ಕೆಪಿಸಿಸಿ ಕಾರ್ಯಾದ್ಯಕ್ಷರಾದ ಸಲೀಂ ಅಹಮ್ಮದ್,ಕೆ.ಪಿ.ಸಿ.ಸಿ ಹಿಂದುಳಿದ ವರ್ಗದ ಅಧ್ಯಕ್ಷರಾದ ಲಕ್ಷ್ಮೀನಾರಾಯಣ,
ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್, ಮಾಜಿ ಶಾಸಕರಾದ ಕೆ. ವಸಂತ ಬಂಗೇರ, ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶೈಲೇಶ್‌ಕುಮಾರ್, ಗ್ರಾಮೀಣ ಬ್ಲಾಕ್ ಕಾಂಗ್ರೆಸ್‌ಅಧ್ಯಕ್ಷರಾದ ರಂಜನ್ ಜಿ. ಗೌಡ ಶಿಫಾರಸ್ಸು ಮಾಡಿದ್ದರು.
ಯೋಗೀಶ್ ಸುವರ್ಣ ಕೋಡ್ಲಕ್ಕೆಯವರು ಸುಮರು 20 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯ ಕಾರ್ಯಕರ್ತನಾಗಿ ದುಡಿಯುತ್ತಿದ್ದು, ಮಡಂತ್ಯಾರು ಗ್ರಾ.ಪಂ ಮಾಜಿ ಸದಸ್ಯರಾಗಿ, ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷರಾಗಿ, ಯುವ ಕಾಂಗ್ರೆಸ್‌ನ ಮಾಜಿ ಸದಸ್ಯರಾಗಿ, ಮಡಂತ್ಯಾರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ, ಬಿಲ್ಲವ ಮಹಾಮಂಡಲದ ಸದಸ್ಯರಾಗಿ, ಯುವವಾಹಿನಿ ಸಂಘದ ಸದಸ್ಯ ಸೇರಿದಂತೆ ಹಲವಾರು ಸಂಘ-ಸಂಸ್ಥೆಗಳಲ್ಲಿ ಸಕ್ರೀಯ ಕಾರ್ಯಕರ್ತನಾಗಿ ದುಡಿಯುತ್ತಿದ್ದಾರೆ.

ನಿಮ್ಮದೊಂದು ಉತ್ತರ