ಮಂಗಳೂರು: ಕಾರೊಂದರಲ್ಲಿ ಬಂದ ದುಷ್ಕರ್ಮಿಗಳು ಮಹಿಳೆಯ ಬ್ಯಾಗ್ ಕಿತ್ತುಕೊಳ್ಳಲು ಯತ್ನಿಸಿದ ಘಟನೆ ಮಂಗಳೂರು
ನಗರದಲ್ಲಿ ರವಿವಾರ ನಡೆದಿದೆ.
ಇಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ನಂಬರ್ ಪ್ಲೇಟ್ ಇಲ್ಲದ ರಿಜ್ಡ್ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಸೈಂಟ್ ಆಗ್ನೆಸ್ ಕಾಲೇಜು ಗೇಟಿನ ಮುಂಭಾಗ ನಡೆದುಕೊಂಡು ಹೋಗುತ್ತಿದ್ದ
ಮಹಿಳೆಯೊಬ್ಬಳ ಬ್ಯಾಗನ್ನು ಕಿತ್ತುಕೊಳ್ಳಲು ಪ್ರಯತ್ನಿಸಿದ್ದಾರೆ.ಈ ವೇಳೆ ಮಹಿಳೆ ಪ್ರತಿರೋಧ ಒಡ್ಡಿದ್ದು, ಅಲ್ಲಿದ್ದ ಸಾರ್ವಜನಿಕರು ದುಷ್ಕರ್ಮಿಗಳನ್ನು ಹಿಡಿಯುವ ಪ್ರಯತ್ನ ಮಾಡಿದಾಗ ಅವರು ಅಲ್ಲಿಂದ ತಪ್ಪಿಸಿಕೊಂಡು ಅದೇ ಕಾರಿನಲ್ಲಿ ಪರಾರಿಯಾಗಿದ್ದಾರೆ. ಘಟನೆಯ ವೀಡಿಯೊ ವೈರಲ್ ಆಗಿದೆ.