ಮಂಗಳೂರು: ಎಸ್ಎಸ್ಎಲ್ ಸಿ ಫಲಿತಾಂಶದ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಮಾಹಿತಿ ನೀಡಿದ್ದು, ಮೇ ಮೂರನೇ ವಾರದಲ್ಲಿ ಎಸ್ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆ ಸೂಸೂತ್ರವಾಗಿ ಪೂರ್ಣಗೊಂಡಿದ್ದು, ಮೇ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಹೇಳಿದ್ದಾರೆ.
ಇನ್ನು ಮೇ. 16 ರಂದೇ ಶಾಲೆಗಳನ್ನು ಪ್ರಾರಂಭಿಸಲಾಗುವುದು, ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. 9 ತಿಂಗಳನ್ನು ಮೂರು ಭಾಗಗಳನ್ನಾಗಿ ಮಾಡಿ ಕಲಿಕೆ ಮಾಡಲಾಗುವುದು. ರಾಜ್ಯದ ಎಲ್ಲ ಶಾಲೆಗಳಲ್ಲಿ ವಾರಕ್ಕೊಂದು ದಿನ ನೈತಿಕ ಶಿಕ್ಷಣ ಜಾರಿಗೊಳಿಸುವ ಚಿಂತನೆ ಇದೆ. ಮಕ್ಕಳ ವ್ಯಕ್ತಿತ್ವ ವಿಕಸನಕ್ಕಾಗಿ ಏಕರೂಪ ಭಾರತೀಯ ಶಿಕ್ಷಣ ನೀತಿಯನ್ನು 1 ಮತ್ತು 2 ನೇ ತರಗತಿಗಳಲ್ಲಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ