: ಬೆಳ್ತಂಗಡಿ: ರಾಜ್ಯದಲ್ಲಿ ಇಂದು ಒಟ್ಟು 103 ಹೊಸ ಕೊರೋನಾಪ್ರಕರಣಗಳು ಪತ್ತೆಯಾಗಿವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡಾ 5 ಪ್ರಕರಣಗಳು ಪತ್ತೆಯಾಗಿದ್ದು, ಎರಡನೇ ದಿನ ಕೂಡಾ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲೇ ಮುಂದುವರಿದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಜಿಲ್ಲೆಯಲ್ಲಿ ಸಕ್ರೀಯ ಪ್ರಕರಣಗಳ ಸಂಖ್ಯೆ 19ಕ್ಕೆ ಏರಿದೆ.ಉಡುಪಿ ಜಿಲ್ಲೆಯಲ್ಲಿ ಒಂದು ಸಕ್ರೀಯ ಪ್ರಕರಣ ಇದ್ದು, ಇಂದು ಯಾವುದೇ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ.
ಇಂದು ಪತ್ತೆಯಾಗಿರುವ 103 ಹೊಸ ಪ್ರಕರಣಗಳ ಪೈಕಿ ಬೆಂಗಳೂರು ನಗರದಲ್ಲಿ 96, ಬೆಂಗಳೂರು ಗ್ರಾಮಾಂತರ ಮತ್ತು ಧಾರವಾಡ ಜಿಲ್ಲೆಗಳಲ್ಲಿ ತಲಾ ಒಂದು ಪ್ರಕರಣಗಳು ಪತ್ತೆಯಾಗಿವೆ.