ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಗೆ ಮುಚ್ಚುವಂತೆ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೆಶಿಸಿದ್ದಾರೆ.
ಜು.29 ರಿಂದ ಆ.1ರವರೆಗೆ ಈ ಆದೇಶ ಜಾರಿಯಲ್ಲಿದ್ದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಅಂಗಡಿ ಮುಂಗಟ್ಟು ತೆರೆಯಲು ಅನುಮತಿಯಿದೆ. ಉಳಿದಂತೆ ಸಂಜೆ 6 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಮುಚ್ಚಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.