ಜಿಲ್ಲಾ ವಾರ್ತೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿ ಚಕ್ರ ವಾಹನ ಸವಾರರಿಗೆ ಹೊಸ ನಿಯಮ ಜಾರಿ.

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿ ಚಕ್ರ ವಾಹನ ಸವಾರರಿಗೆ ಹೊಸ ನಿಯಮ ಇಲ್ಲಿನ ಪೊಲೀಸ್ ಇಲಾಖೆ ಜಾರಿಗೆ ತಂದಿದೆ

ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರಿರಿಗೆ ಅವಕಾಶ ವಿಲ್ಲ ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರಿನಲ್ಲಿ ತಿಳಿಸಿದ್ದಾರೆ.
ಹದಿನೆಂಟು ವರ್ಷದ ಕೆಳಗಿನ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಹಿಳೆಯರಿಗೆ ಈ ನಿಯಮದಿಂದ ರಿಯಾಯಿತಿ ನೀಡಲಾಗಿದೆ. ಕೇವಲ ಪುರುಷ ಹಿಂಬದಿ ಸವಾರರಿಗೆ ಮಾತ್ರ ಈ ನಿಯಮ ಅನ್ವಯಿಸಲಿದೆ. ಮುಂದಿನ ಒಂದು ವಾರದ ಮಟ್ಟಿಗೆ ಜಿಲ್ಲೆಯಲ್ಲಿ ಈ ನಿಯಮವನ್ನು ಪಾಲನೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.

ನಿಮ್ಮದೊಂದು ಉತ್ತರ