ಮಂಗಳೂರು: ಸರಣಿ ಕೊಲೆಗಳ ಬಳಿಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ನೈಟ್ ಕರ್ಪ್ಯೂವನ್ನು ಹೇರಲಾಗಿತ್ತು. ಆದರೆ ನಾಳೆಯಿಂದ (ಸೋಮವಾರದಿಂದ) ನೈಟ್ ಕರ್ಪ್ಯೂ ತೆಗೆದುಹಾಕಲಾಗುವುದು ಎಂದು ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ತಿಳಿಸಿದ್ದಾರೆ.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆದ ಸರಣಿ ಹತ್ಯೆಗಳ ಬಳಿಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆಯ ಮನವಿ ಮೇರೆಗೆ ಜಿಲ್ಲಾಧಿಕಾರಿ ರಾಜೇಂದ್ರ ಕೆ ವಿ ಅವರು ರಾತ್ರಿ ಕರ್ಪ್ಯೂವನ್ನು ವಿಧಿಸಿದ್ದರು, ಮೊದಲು ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಇದ್ದ ನಿರ್ಬಂಧವನ್ನು ಬಳಿಕ ರಾತ್ರಿ 9 ರಿಂದ ಬೆಳಿಗ್ಗೆ 6 ರವರೆಗೆ ವಿಧಿಸಲಾಗಿತ್ತು. ಆದರೆ ಇದೀಗ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿರುವ ಕಾರಣ ಸೋಮವಾರದಿಂದ ಎಲ್ಲಾ ರೀತಿಯ ನಿರ್ಬಂಧಗಳನ್ನು ತೆಗೆದು ಹಾಕಲಾಗಿದ್ದು, ಅಂಗಡಿ ಮುಂಗಟ್ಟುಗಳು ಎಂದಿನಂತೆ ಕಾರ್ಯ ನಿರ್ವಹಿಸಬಹುದಾಗಿದೆ.
ವಾಹನ ಸಂಚಾರಕ್ಕೆ ಯಾವುದೇ ನಿರ್ಬಂಧ ಇಲ್ಲ. ಆದರೆ ಅನಗತ್ಯ ಸಂಚಾರ ಮಾಡದಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಇನ್ನು ಸೆಕ್ಷನ್ 144 ಅನ್ವಯ ಜಾರಿಯಲ್ಲಿರುವ ನಿರ್ಬಂಧಗಳನ್ನು ಆಗಸ್ಟ್ 14 ರವರೆಗೆ ಮುಂದುವರೆಸಲಾಗಿದೆ.