ಜಿಲ್ಲಾ ವಾರ್ತೆ

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಗಂಗಾಕಲ್ಯಾಣ ನೀರಾವರಿ ಯೋಜನೆಗೆ ಅರ್ಜಿ ಆಹ್ವಾನ…

ಬೆಳ್ತಂಗಡಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಒದಗಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಬಯಸುವ ಫಲಾಘಕ್ಷಿಗಳು, ದಿನಾಂಕ:6-9-2022 ರಿಂದ 20-10-2022 ರ ವರೆಗೆ ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಮಂಗಳೂರು ಒನ್, ಕರ್ನಾಟಕ ಒನ್‌ ಸೇವಾ ಕೇಂದ್ರಗಳಲ್ಲಿ ಸಲ್ಲಿಸಬಹುದು. ಮಾಹಿತಿಗಾಗಿ ಕೆಳಗೆ ಕೊಟ್ಟಿರುವ ಪ್ರಕಟಣೆ ನೋಡಿ…

ನಿಮ್ಮದೊಂದು ಉತ್ತರ