ಬೆಳ್ತಂಗಡಿ : ಸುರತ್ಕಲ್ ಟೋಲ್ ಗೇಟ್ ತೆರವು ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಸುರತ್ಕಲ್‌ನ ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿಯವರ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರವಾಗಿ ಬರೆದವರನ್ನು ಮಹಿಳಾ ದೌರ್ಜನ್ಯ ಕಾಯಿದೆಯಡಿ ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ಆಗ್ರಹಿಸಿದ್ದಾರೆ.
ಮಹಿಳೆಯರ ಬಗ್ಗೆ ಮಾನಹಾನಿಕರ ಮಾತುಗಳನ್ನಾಡುತ್ತಿರುವುದು ಇದು ಅವರ ನೈಜ ಸಂಸ್ಕೃತಿಯನ್ನು ತೋರಿಸುತ್ತದೆ. ಈ ವಿಚಾರದಲ್ಲಿ ಪ್ರತಿಭಾ ಕುಳಾಯಿಯವರು ಧೃತಿಗುಂದದೆ ಹೋರಾಟ ಮುಂದುವರೆಸಬೇಕು. ಅವರಿಗೆ ನನ್ನ ಸಂಪೂರ್ಣ ನೈತಿಕ ಬೆಂಬಲವಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ