ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವಿಕುಮಾರ್ ಎಂ.ಆರ್. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.
ಹಿಂದಿನ ಡಿಸಿ ಡಾ.ರಾಜೇಂದ್ರ ಕೆ.ವಿ ವರ್ಗಾವಣೆಗೊಂಡ ನಂತರ ಹೆಚ್ಚುವರಿಯಾಗಿ ನೀಡಲಾಗಿದ್ದ ಡಾ.ಕುಮಾರ್ ಅವರಿಂದ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.
ರವಿಕುಮಾರ್ ಅವರು 2012 ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಆಗಿದ್ದು,ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆಯು ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಸೂಚನೆ ನೀಡಿದೆ.
.