ಜಿಲ್ಲಾ ವಾರ್ತೆ

ಯಕ್ಷ ಕೂಟ ಮಧ್ವ* *ಡಿ.11: ವಾರ್ಷಿಕೋತ್ಸವ , ತಾಳಮದ್ದಳೆ*

ಬಂಟ್ವಾಳ: ಬಂಟ್ವಾಳ ತಾಲೂಕು ಕಾವಳಪಡೂರು ಗ್ರಾಮದ ಮಧ್ವ ಯಕ್ಷಕೂಟ ಇದರ ತೃತೀಯ ವಾರ್ಷಿಕೋತ್ಸವ ಡಿ.11ರಂದು ಮಧ್ವದ ಮಧ್ವ ಪ್ಯಾಲೇಸ್‌ನಲ್ಲಿ ನಡೆಯಲಿದೆ.
ಮಧ್ಯಾಹ್ನ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವ ಬಿ.ರಮಾನಾಥ ರೈ, ಮತ್ತಿತರ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿರುವರು. ಬಳಿಕ ಜಿಲ್ಲೆಯ ಖ್ಯಾತ ಕಲಾವಿದರಿಂದ ರುಕ್ಮಿಣಿ ಸ್ವಯಂವರ ಯಕ್ಷಗಾನ ತಾಳಮದ್ದಳೆ ನಡೆಯಲಿದೆ ಎಂದು ಅಧ್ಯಕ್ಷ ಭಾಸ್ಕರ ಶೆಟ್ಟಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ