ನಿಧನ ಸುದ್ದಿ

ಬಂಟ್ವಾಳ: ಅರಣ್ಯ ಇಲಾಖೆ ಸಿಬ್ಬಂದಿ ಹಠಾತ್ ಕುಸಿದು ಬಿದ್ದು ಮೃತ್ಯು

ಬಂಟ್ವಾಳ ಅರಣ್ಯ ಇಲಾಖೆಯಲ್ಲಿ ಸಿಬ್ಬಂದಿಯಾಗಿದ್ದ ವೀರಕಂಭ ನಿವಾಸಿ ಜಯರಾಮ ಮೂಲ್ಯ ಕರ್ತವ್ಯನಿರತರಾಗಿದ್ದ ಸಂದರ್ಭ ಕಚೇರಿಯಲ್ಲಿ ಹಠಾತ್‌ ಕುಸಿದು ಬಿದ್ದು ಮೃತಪಟ್ಟ ಘಟನೆ ಬಿಸಿ ರೋಡಿನಲ್ಲಿ ನಡೆದಿದೆ. ಸುಮಾರು 30 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದರು.

ನ.29ರಂದು ರಾತ್ರಿ ಪಾಳಿಯಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಜೆ ವೇಳೆ ಇವರಿಗೆ ತಲೆಸುತ್ತು ಬರುವ ವಿಚಾರ ಇಲಾಖೆಯ ಜೊತೆ ಕೆಲಸಗಾರರಲ್ಲಿ ಹೇಳಿಕೊಂಡಿದ್ದರು ಎನ್ನಲಾಗಿದೆ. ಕಚೇರಿಯಲ್ಲಿ ಒಬ್ಬನೇ ಕರ್ತವ್ಯದಲ್ಲಿದ್ದು ಮುಂಬಾಗಿಲ ಚಿಲಕ ಹಾಕಿಕೊಂಡು ಕೋಣೆಯೊಳಗೆ ಮಲಗಲು ಹೋಗುವ ವೇಳೆ ಟೇಬಲ್ ಮೇಲೆ ಕುಸಿದು ಬಿದ್ದು ಹೃದಯಾಘಾತದಿಂದ ನಿಧನರಾಗಿರಬೇಕು ಎಂದು ಸಂಶಯ ವ್ಯಕ್ತಪಡಿಸಲಾಗಿದೆ.
ಬೆಳಿಗ್ಗೆ ಸುಮಾರು 6.30 ವರೆಯವರೆಗೂ ಇಲಾಖೆಯ ಬಾಗಿಲು ಮುಚ್ಚಿಕೊಂಡಿದ್ದನ್ನು ಕಂಡು ಇಲಾಖೆಯ ಚಾಲಕ ಕಿಟಕಿ ಬಾಗಿಲು ತೆರದು ನೋಡಿದಾಗ ಜಯರಾಮ ಅವರು ಟೇಬಲ್ ಮೇಲೆ ಬಿದ್ದ ಸ್ಥಿತಿಯಲ್ಲಿರುವುದು ಕಂಡು ಬಂದಿದೆ.

ನಿಮ್ಮದೊಂದು ಉತ್ತರ