ಬೆಳ್ತಂಗಡಿ: ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ರಾಜೀವ ಗೌಡ(58) ಅವರು ಹೃದಯಾಘಾ
ತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಧರ್ಮಸ್ಥಳ ನಿವಾಸಿಯಾದ ಇವರು ಕಳೆದ ಜುಲೈ ತಿಂಗಳಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಇದರ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡು ಅಧಿಕಾರ ಸ್ವೀಕರಿಸಿದ್ದರು.ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದ ಅವರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಸೇರಿದಂತೆ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ತನ್ನನ್ನು ತೊಡಗಿಸಿಕೊಂಡಿದ್ದರು.