ಬೆಳ್ತಂಗಡಿ: ಕೊಯ್ಯೂರು ಗ್ರಾಮದ ಕೊಪ್ಪದಗಂಡಿ ನಿವಾಸಿ, ಪ್ರಗತಿಪರ ಕೃಷಿಕ, ಹಿರಿಯ ಸಾಮಾಜಿಕ ಮುಂದಾಳು ಐ.ಎಲ್ ಪಿಂಟೋ (ಇಸಿದೋರ್ ಲಿಯೋ ಪಿಂಟೋ) ಆ.21ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಮೃತರು ಬೆಳ್ತಂಗಡಿ ಕೆಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರು ಸೇರಿದಂತೆ ವಿವಿಧಸಂಘಸಂಸ್ಥೆಗಳಲ್ಲಿತೊಡಗಿಸಿಕೊಂಡಿದ್ದರು.ಅವರ ಅಂತ್ಯಸಂಸ್ಕಾರ ರವಿವಾರ ಬೆಳಿಗ್ಗೆ 10.30 ಗಂಟೆಗೆ ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ವಠಾರದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.ಮೃತರು ಪುತ್ರ, ಇಬ್ಬರು ಪುತ್ರಿಯರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.