ಕಲ್ಮಂಜ: ಇಲ್ಲಿಯ ಕರಿಯನೆಲ ನಿವಾಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಕೃಷಿ ವಿಭಾಗದಲ್ಲಿ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸಿದ್ಧಪ್ಪ ಗೌಡ (57ವ) ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲಿ ಸೆ.13ರಂದು ನಿಧನರಾದರು.
ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಸುಮಾರು 10 ವರ್ಷಗಳ ಕಾಲ ಸೇವಾ ನಿರತರಾಗಿ ಸೇವೆ ಸಲ್ಲಿಸಿದ ಬಳಿಕ ಕಳೆದ 15ವರ್ಷಗಳಿಂದ ಕ್ಷೇತ್ರದ ಕೃಷಿ ವಿಭಾಗದಲ್ಲಿ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಮೃತರು ಪತ್ನಿ ಸುಮತಿ, ಪುತ್ರ ಸತ್ಯಪ್ರಸಾದ್, ಪುತ್ರಿಯರಾದ ಮಮತಾ, ಹರ್ಷಿತಾ, ಶುಭಾ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.