ಬೆಳ್ತಂಗಡಿ: ಕನ್ನಡ ಚಲನಚಿತ್ರರಂಗದ ಖ್ಯಾತ ನಟ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್(46.ವ) ರವರು ಹೃದಯಾಘಾತದಿಂದ ಅ.29 ರಂದು ವಿಧಿವಶರಾಗಿದ್ದಾರೆ.
ಇಂದು ಬೆಳಿಗ್ಗೆ ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆರೋಗ್ಯ ಸ್ಥಿತಿ ಗಂಭೀರಗೊಂಡ ಕಾರಣ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.