ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಮಲ್ಲಿಕಾ ( 40 ವ ) ಅವರಿಗೆ ಜುಲೈ 14ರಂದು ಆರೋಗ್ಯದಲ್ಲಿ ಏರುಪೇರಾಗಿದ್ದು ತಕ್ಷಣ ಅವರನ್ನು ಬೆಳ್ತಂಗಡಿಯ ಸ್ಥಳೀಯ ಆಸ್ಪತ್ರೆಗೆ ಕೊಂಡೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು ಅದರೆ ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.ಕಳೆದ 7 ವರ್ಷಗಳಿಂದ ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತಿದ್ದ ಅವರು ಪತಿ ತಂದೆ ತಾಯಿ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.ಜು 15 ರಂದು ಅವರ ಅಂತ್ಯ ಸಂಸ್ಕಾರ ಗುರುವಾಯನಕೆರೆಯ ಪಿಲಿಚಂಡಿ ಕಲ್ಲು ಬಳಿ ಅವರ ನಿವಾಸದಲ್ಲಿ ನಡೆಯಲಿದ್ದು, ಮೃತರ ಗೌರವಾರ್ಥ ಕಾಲೇಜಿಗೆ ರಜೆ ನೀ ಡಲಾಗಿದೆ.