ನಿಧನ ಸುದ್ದಿ

ಮುಂಡಾಜೆ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾವಿಭಾಗದ ವಿದ್ಯಾರ್ಥಿ ಸಚಿನ್ ಹೃದಯಘಾತದಿಂದ ನಿಧನ

 

ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಪಿಲಿಕಳ ಪಂಪ್ ಹೌಸ್ ಬಳಿಯ ನಿವಾಸಿ ಸಚಿನ್ (17) ಆ.9 ರಂದು ಹೃದಯಘಾತದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.
ಮುಂಡಾಜೆ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಈತ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಎಂದು ಹೇಳಲಾಗಿದೆ.ಆ 9 ರಂದು ಕಾಲೇಜಿಗೆ ರಜೆ ಇದ್ದು, ಮನೆಯಲ್ಲಿದ್ದ ಸಂದರ್ಭ ಏಕಾಏಕಿ ಎದೆ ನೋವು ಕಾಣಿಸಿಕೊಂಡಿತ್ತು.
ಅವಳಿ ಮಕ್ಕಳ ಪೈಕಿ ಓರ್ವರಾಗಿರುವ ಇವರಿಗೆ ತಂದೆ,ತಾಯಿ, ಹಾಗೂ ಇಬ್ಬರು ಸಹೋದರರಿದ್ದಾರೆ.

ನಿಮ್ಮದೊಂದು ಉತ್ತರ