ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬಾರ್ಯ ನಿವಾಸಿ, ತಾಲೂಕು ಪಂಚಾಯಿತಿಯ ನಿವೃತ್ತ ಅಧಿಕಾರಿ ರಾಮಚಂದ್ರ ಮಯ್ಯ (75ವ) ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಬಾರ್ಯ, ತಣ್ಣೀರುಪಂತ, ಅಜ್ಜಾವರ, ಅಡ್ಯಾರು ಗ್ರಾಮ ಪಂಚಾಯಿತಿಯಲ್ಲಿ ಕಾರ್ಯದರ್ಶಿಯಾಗಿ, ಬಳಿಕ ತಾಲೂಕು ಪಂಚಾಯಿತಿಯಲ್ಲಿ ವಿಸ್ತರಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.
ಮೃತರು ಪತ್ನಿ, ಇಬ್ಬರು ಗಂಡು, ಓರ್ವ ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.