ನಿಧನ ಸುದ್ದಿ

ಕಾವೂರು ಠಾಣೆಯ ಹೆಡ್ ಕಾನ್ ಸ್ಟೇಬಲ್ ಇಂದು ಮುಂಜಾನೆ ಹೃದಯಾಘಾತದಿಂದ ನಿಧನ

ಮಂಗಳೂರು: ಕಾವೂರು ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹನುಮಂತ ಲಮಾಣಿ (38) ಇಂದು ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಳೆದ ಎರಡು ವರ್ಷಗಳಿಂದ ಕಾವೂರು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ರು.ಮೂಲತಃ ಬಾಗಲಕೋಟೆಯವರಾದ ಇವರು ಊರಿಗೆ ಹೋಗಿದ್ರು. ಇಂದು ಬೆಳಗ್ಗೆ ಎದೆನೋವಿನಿಂದ ಬಳಲುತ್ತಿದ್ದು, ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.

ನಿಮ್ಮದೊಂದು ಉತ್ತರ