ಬೆಳ್ತಂಗಡಿ: ದ. ಕ. ಜಿಲ್ಲಾ ಧಾರ್ಮಿಕ ಪರಿಷತ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಪಕ್ಕಳ ಇವರು ಬೆಳ್ತಂಗಡಿ ತಾಲೂಕು, ನಡ ಗ್ರಾಮದ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಮಣ್ಣಿನ ಹರಕೆ ಸಮರ್ಪಿಸಿದರು. ದೇವಸ್ಥಾನದ ಆನುವಂಶಿಕ ಆಡಳಿತ ಮೋಕ್ತೇಸರರಾದ ಡಾ. ಸತೀಶ್ಚಂದ್ರ ಸುರ್ಯಗುತ್ತು ಅವರನ್ನು ಗೌರವಿಸಿದರು.