ಮುಂಡೂರು: ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಾಂಬಿಕ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳ ಗಿರಿ ಮುಂಡೂರುನಲ್ಲಿ ನಾಗರಪಂಚಮಿಯ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ಶ್ರೀ ನಾಗಬ್ರಹ್ಮ ದೇವರಿಗೆ ತನು ತಂಬಿಲ ವಿಶೇಷ ಪೂಜೆ ಆ.9ರಂದು ಜರುಗಿತು.
ಬೆಳಿಗ್ಗೆ ನಾಗಕಲ್ಲುರ್ಟಿ ದೈವಸ್ಥಾನ ಹಾಗೂ ಶ್ರೀ ನಾಗಾಂಬಿಕ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ಬಳಿಕ ನಾಗದೇವರಿಗೆ
ಆಡಳಿತ ಮೋಕ್ತೇಸರರಾದ ರಾಜೀವ ಅವರ ನೇತೃತ್ವದಲ್ಲಿ ತನು ತಂಬಿಲ ವಿಶೇಷ ಪೂಜೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಶ್ರೀ ನಾಗಾಂಬಿಕಾ ಭಜನಾ ಮಂಡಳಿಯ ಅಧ್ಯಕ್ಷರು ಹಾಗೂ ಕಾರ್ಯದರ್ಶಿ, ಸರ್ವ ಸದಸ್ಯರು, ಊರ, ಪರವೂರ ಭಕ್ತರು ಭಾಗವಹಿಸಿ ಧನ್ಯತೆಯನ್ನು ಪಡೆದರು.