ಬಳಂಜ : ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ-ನಾಲ್ಕೂರು-ತೆಂಕಕಾರಂದೂರು ಇದರ ಸಹಯೋಗದಲ್ಲಿ ಬಳಂಜದಲ್ಲಿ ನೂತನವಾಗಿ ನಿರ್ಮಾಣಗೊಂಡ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನವನ್ನು ಇಂದು (ಮಾ.11) ಶಾಸಕ ಹರೀಶ್ ಪೂಂಜ ಲೋಕಾರ್ಪಣೆಗೊಳಿಸಿ, ಶುಭ ಹಾರೈಸಿದರು.
ಭಾಗಿ ಮುಂಡಪ್ಪ ಪೂಜಾರಿ ಸಭಾ ವೇದಿಕೆಯನ್ನು ವಿಧಾನ ಪರಿಷತ್ ಶಾಸಕ ಕೆ ಹರೀಶ್ ಕುಮಾರ್ ನೆರವೇರಿಸಿ, ಶುಭ ಹಾರೈಸಿದರು. ಎಂ.ಎಲ್.ಸಿ ಪ್ರತಾಪ್ ಸಿಂಹ ನಾಯಕ್ ರವರು ನಾಮಫಲಕ ಅನಾವರಣಗೊಳಿಸಿದರು. ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ನಂತರ ನಡೆದ ಸಭಾ ಕಾರ್ಯಕ್ರದಲ್ಲಿ ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ, ಸಂಗಬೆಟ್ಟು ಕ್ಷೇತ್ರದ ಜಿ.ಪಂ ಸದಸ್ಯ ಎಂ. ತುಂಗಪ್ಪ ಬಂಗೇರ, ಬಳಂಜ ಗ್ರಾ.ಪಂ ಅಧ್ಯಕ್ಷ ಹೇಮಂತ್, ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಅಧ್ಯಕ್ಷ ರಂಜಿತ್ ಹೆಚ್.ಡಿ ಸುಧಾಮ
ಗೌರವ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಲೋಕಾರ್ಪಣೆ ಸಮಿತಿ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್,ಎಸ್, ಪ್ರಧಾನ ಸಂಚಾಲಕ ಸಂತೋಷ್ ಪಿ ಕೋಟ್ಯಾನ್, ಗೌರವ ಮಾರ್ಗದರ್ಶಕ ಕೆ ವಸಂತ ಸಾಲಿಯಾನ್,ಪ್ರಧಾನ ಕಾರ್ಯದರ್ಶಿ ಯೋಗೀಶ್ ಯೈಕುರಿ, ಗೌರವಾಧ್ಯಕ್ಷ ಹೆಚ್. ಧರ್ಣಪ್ಪ ಪೂಜಾರಿ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ವಿನುಷಾ ಪ್ರಕಾಶ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಜಗದೀಶ್ ಬಳ್ಳಿದಡ್ಡ ,ಮಾಧ್ಯಮ ಸಮಿತಿ ಸಂಚಾಲಕ ಮನೋಹರ ಬಳಂಜ, ಸಾಂಸ್ಕೃತಿಕ ಮತ್ತು ಕಾರ್ಯಕ್ರಮ ನಿರ್ವಹಣಾ ಸಮಿತಿ ಸಂಚಾಲಕ ಚಂದ್ರಹಾಸ ಬಳಂಜ, ಬೆಳಕು ಮತ್ತು ಧ್ವನಿವರ್ಧಕ ಸಮಿತಿ ಸಂಚಾಲಕ ದಿನೇಶ್ ಪೂಜಾರಿ ಅಂತರ, ಸಾಂಸ್ಕೃತಿಕ ಕಾರ್ಯಕ್ರಮದ ಸಹಸಂಚಾಲಕ ಜಗದೀಶ್ ಪರಾರಿ, ಬಳಂಜ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.