ಬೆಳ್ತಂಗಡಿ: ದ.ಕ.ಜಿಲ್ಲಾ ಚಿನ್ನದ ಕೆಲಸಗಾರರ ಸಂಘ (ರಿ) ರಥಬೀದಿ ಮಂಗಳೂರು ಇದರ ವತಿಯಿಂದ ಕರ್ನಾಟಕ ಸರ್ಕಾರದ ಅಸಂಘಟಿತ ಕಾರ್ಮಿಕರ ವಲಯದಲ್ಲಿ ಅಕ್ಕಸಾಲಿಗರಿಗೆ ನೀಡುವ ಕೋವಿಡ್ 19 ರ ಗೈಡ್ ಲೈನ್ಸ್ ನಲ್ಲಿರುವ ಕೆಲವೊಂದು ನಿಯಮಗಳನ್ನು ಪರಿಷ್ಕರಣೆ ಮಾಡುವ ಬಗ್ಗೆ ಕಾರ್ಮಿಕ ಸಚಿವರಿಗೆ ಹಾಗೂ ಮುಖ್ಯಮಂತ್ರಿಗಳಲ್ಲಿ ಚರ್ಚಿಸಬೇಕೆಂದು ಬೆಳ್ತಂಗಡಿ ತಾಲೂಕು ಶಾಸಕರಾದ ಹರೀಶ್ ಪೂಂಜ ಇವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಚಿನ್ನದ ಕೆಲಸಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಆಚಾರ್ಯ ಹಲೇಜಿ, ಸಂಘದ ಮಾಜಿ ಅಧ್ಯಕ್ಷರಾದ ರಮೇಶ್ ಉಪ್ಪಿನಂಗಡಿ, ಹಾಗೂ ವಿಶ್ವಕರ್ಮ ಅಭ್ಯುದಯ ಸಂಘ ಬೆಳ್ತಂಗಡಿ ಇದರ ಕಾರ್ಯದರ್ಶಿ ಗಣೇಶ ಆಚಾರ್ಯ ಬಲ್ಯಯಾಯಕೋಡಿ, ಹಾಗೂ ಸಂಘಟನ ಕಾರ್ಯದರ್ಶಿ ರಾಘವೇಂದ್ರ ಆಚಾರ್ಯ.ಎನ್.ಉಪಸ್ಥಿತರಿದ್ದರು.