ಗುರುವಾಯನಕೆರೆ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮವಾಗಿ ಗುರುವಾಯನಕೆರೆ ಕೆರೆಯ ಒಂದು ಬದಿಯಲ್ಲಿ ಕುಸಿತ ಕಂಡು ಬಂದಿದೆ.
ಕುಸಿತ ರಸ್ತೆಯ ಅಂಚಿನ ವರೆಗೆ ಬಂದಿದ್ದು, ವಾಹನ ಚಾಲಕರಿಗೆ ಹಾಗೂ ಪಾದಚಾರಿ ಗಳಿಗೆ ಅಪಾಯವನ್ನು ಉಂಟು ಮಾಡುವ ಸಾಧ್ಯತೆ ಇದೆ.ಅಪಾಯದ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದರು, ಸಂಬಂಧ ಪಟ್ಟ ಅಧಿಕಾರಿಗಳು ಗಮನಿಸುವಂತೆ ಒತ್ತಾಯಿಸಿದ್ದಾರೆ.