ನಡ: 1 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಉಜಿರೆ – ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ ಸಂಪರ್ಕ ರಸ್ತೆಯನ್ನು ಜೂ.20 ರಂದು ಕೋವಿಡ್ ನಿಯಮಾವಳಿಯನ್ನು ಪಾಲಿಸಿ ಸರಳ ರೀತಿಯಲ್ಲಿ ಶಾಸಕರಾದ ಹರೀಶ್ ಪೂಂಜ ಉದ್ಘಾಟಿಸಿದರು.
.ಈ ಸಂದರ್ಭದಲ್ಲಿ ಸದಾಶಿವರುದ್ರ ದೇವಸ್ಥಾನ, ಸುರ್ಯ ಇದರ ಆಡಳಿತ ಮೊಕ್ತೇಸರರಾದ ಸುಭಾಶ್ಚಂದ್ರ ಜೈನ್, ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಜಯಂತ್ ಗೌಡ , ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಣೇಶ್ ನಾವುರು, ಡಾ.ಪ್ರದೀಪ್ ನಾವುರು, ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರುಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.