ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಕೆ. ಸಲೀಮ್ ನೇಮಕ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ವಿಭಾಗದ ವ್ಯಾಪ್ತಿಗೆ ಒಳಪಡುವ ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರನ್ನಾಗಿ ಗುರುವಾಯನಕೆರೆಯ ಕೆ. ಸಲೀಮ್ ಅವರು ನೇಮಕಗೊಂಡಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಇಲಾಖೆಯ ಅಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ ಅವರು ಈ ನೇಮಕಾತಿಯನ್ನು ಮಾಡಿ ಆದೇಶ ಹೊರಡಿಸಿದ್ದಾರೆ. ಎರಡು ಬಾರಿ ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿರುವ ಸಲೀಮ್ ಅವರು ಕುವೆಟ್ಟು ಕಾಂಗ್ರೆಸ್ ಗ್ರಾಮ ಸಮಿತಿ, ಕುವೆಟ್ಟು ಹಾಗೂ ಓಡಿಲ್ನಾಳ ಗ್ರಾಮಗಳ ಕಾಂಗ್ರೆಸ್ ವಲಯ ಸಮಿತಿ ಅಧ್ಯಕ್ಷರಾಗಿ, ಬೆಳ್ತಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಚುನಾಯಿತ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.
ಪ್ರಸ್ತುತ ಕುವೆಟ್ಟು ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷರಾಗಿ ಹಲವಾರು ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಸಂಘ- ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ನಿಮ್ಮದೊಂದು ಉತ್ತರ