ಬೆಳ್ತಂಗಡಿ: *ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ತಾಲೂಕು ಸಮಿತಿಯ ವತಿಯಿಂದ ನಡೆದ ಇಂಡಿಯೋತ್ಸವ ವಿಶೇಷ ಕಾರ್ಯಕ್ರಮದಲ್ಲಿ ಸರ್ಕಾರಿ ಇಲಾಖೆಯ ದಕ್ಷ ಸೇವೆಗಾಗಿ ಬೆಳ್ತಂಗಡಿ ತಾಲೂಕು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶಿವಪ್ರಸಾದ ಅಜಿಲರವರನ್ನು ಸನ್ಮಾನಿಸಲಾಯಿತು.
*ಇದೇ ಸಂದರ್ಭದಲ್ಲಿ ಮಾತನಾಡಿದ ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ಕೆ ವಸಂತ ಬಂಗೇರರವರು ತನ್ನ ಇಪ್ಪತೈದು ವರ್ಷದ ಶಾಸಕತ್ವದ ಅವಧಿಯಲ್ಲಿ ಶಿವಪ್ರಸಾದ ಅಜಿಲರು ಮಾಡಿದ ಕೆಲಸ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ,ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೂ ಓರ್ವ ಮಾದರಿ ಅಧಿಕಾರಿ ಎಂದು ಸನ್ಮಾನಿತ ಶಿವಪ್ರಸಾದ ಅಜಿಲರ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು*