ಗ್ರಾಮಾಂತರ ಸುದ್ದಿ

ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮತ್ತು ಉದ್ಯೋಗದ ಬಗ್ಗೆ ಮಾರ್ಗದರ್ಶನ ಕಾರ್ಯಕ್ರಮ

ಸಮುದಾಯದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದೆ ಬರಬೇಕು : ಹರೀಶ್ ಕಾರಿಂಜ.

ಬೆಳ್ತಂಗಡಿ: ಗುರುವಾಯನಕೆರೆಯ ಕುಲಾಲ ಮಂದಿರದಲ್ಲಿ ಸ್ವಜಾತಿ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರ ಸೇವಾ ಸಂಘ (ರಿ) ಇವರ ಆಶ್ರಯದಲ್ಲಿ ಬೆಳ್ತಂಗಡಿ ಸಾಂತ್ವನ ನಿಧಿ ಇವರು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮತ್ತು ಉದ್ಯೋಗದ ಬಗ್ಗೆ ಮಾರ್ಗದರ್ಶನ ಕಾರ್ಯಕ್ರಮವನ್ನು ನ.14 ರಂದು ನಡೆಸಿಕೊಟ್ಟರು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷರಾದ ಹರೀಶ್ ಕಾರಿಂಜ ಉದ್ಘಾಟಿಸಿ ಸ್ವಜಾತಿ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದೆ ಬರಬೇಕು ಇದರಿಂದ ಜಾತಿ ಮತ್ತು ಸಮಾಜ ಪರಿವರ್ತನೆ ವಾಗುತ್ತದೆ, ಕುಲಾಲ ಸಂಘವು ವಿದ್ಯಾರ್ಥಿಗಳಿಗೆ ಸದಾ ಸಹಕಾರ ಮಾಡುತ್ತೇವೆ ಎಂದರು. ಕಾರ್ಯಕ್ರಮದಲ್ಲಿ ಯುವ ವೇದಿಕೆ ಅಧ್ಯಕ್ಷ ಉಮೇಶ್ ಕುಲಾಲ್, ಕಣಿಯೂರು ಕುಲಾಲ ಸಂಘದ ಅಧ್ಯಕ್ಷ ಉಮೇಶ್ ಕುಲಾಲ್ ಮತ್ತು ಸಂಪನ್ಮೂಲ ವ್ಯಕ್ತಿಗಳಾದ ಜಗನ್ನಾಥ್ ಕುಲಾಲ್ , ಸದಾನಂದ ಕುಲಾಲ್ , ಸತೀಶ್ ಬಂಗೆರ , ನಾರಾಯಣ ಮೂಲ್ಯ ಕಲಿಕ ಮತ್ತು ಸಾಂತ್ವನ ನಿದಿಯ ಸಂಚಾಲಕ ಯತೀಶ್ ಸಿರಿಮಜಲು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ರಾಜು ನಾಯ್ಕ್, ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು ಮತ್ತು ಎಮ್ಲಿನ್ ಡಿ.ಸೋಜ, ವಾಣಿಜ್ಯ ತೆರಿಗೆ ನಿರೀಕ್ಷಕರು ಇವರು ಮಾಹಿತಿ ನೀಡಿದರು. ಚಾರ್ಟರ್ಡ್ ಅಕೌಂಟೆನ್ಸಿ ಬಗ್ಗೆ ಅಭಿನವ ಕುಲಾಲ್ ಸಿ.ಎ ಇವರು ಮಾಹಿತಿ ನೀಡಿದರು ಕಾರ್ಯಕ್ರಮದಲ್ಲಿ ಒಟ್ಟು 40 ಜನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ನಿಮ್ಮದೊಂದು ಉತ್ತರ