ಗ್ರಾಮಾಂತರ ಸುದ್ದಿ

ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಮೈರೋಳ್ತಡ್ಕ :‌ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಎಸ್. ಎಸ್. ಎಲ್. ಸಿ ಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಶಾಂಭವಿ ಜ್ಞಾನ ವಿಕಾಸ ಕೇಂದ್ರದ ಸದಸ್ಯರ ಮಕ್ಕಳಾದ ನಿಶಾ 595, ಪೂರ್ವಿಕ 582, ಹಾಗೂ NMMS ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಯಶ್ವಿತ್ ಗೌಡ. ಕೆ ಯವರನ್ನು ಶಾಂಭವಿ ಜ್ಞಾನ ವಿಕಾಸ ಕೇಂದ್ರದ ಪರವಾಗಿ ಮೇ.29ರಂದು ಅಭಿನಂದಿಸಲಾಯಿತು.

ಈ ಕಾರ್ಯಕ್ರಮ ದಲ್ಲಿ ವಲಯ ಮೇಲ್ವಿಚಾರಕರಾದ ಶ್ರೀಮತಿ ಪ್ರೇಮಾ, ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾ, ಗ್ರಾಮ ಪಂಚಾಯತ್ ಸದಸ್ಯರಾದ ದಿನೇಶ್ ಗೌಡ ಹಾಗೂ ಶಾಂಭವಿ ಜ್ಞಾನ ವಿಕಾಸ ಕೇಂದ್ರದ ಸಂಯೋಜಕಿ ಶ್ರೀಮತಿ ಹರಿಣಾಕ್ಷಿ ಹಾಗೂ ಶಾಂಭವಿ ಜ್ಞಾನ ವಿಕಾಸ ಕೇಂದ್ರದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

ನಿಮ್ಮದೊಂದು ಉತ್ತರ