ಗ್ರಾಮಾಂತರ ಸುದ್ದಿ

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಿಂದ ಪ್ರಶಸ್ತಿ

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಪಡಂಗಡಿ 2021-22ನೇ ಸಾಲಿನಲ್ಲಿ ಮಾಡಿರುವ ವಿಶೇಷ ಸಾಧನೆಗೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಿಂದ ಪ್ರಶಸ್ತಿಗೆ ಭಾಜನವಾಗಿದೆ.

ಆ.5ರಂದು ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಮಹಾಸಭೆಯಲ್ಲಿ ಪ್ರಶಸ್ತಿಯನ್ನು ಸಹಕಾರಿ ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡೀಸ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಕೇಶಿನಿ ಶೆಟ್ಟಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್ ರಾಜೇಂದ್ರ ಕುಮಾರ್, ಬ್ಯಾಂಕಿನ ನಿರ್ದೇಶಕರುಗಳು ಹಾಗೂ ಇತರರು ಉಪಸ್ಥಿತರಿದ್ದರು.

ನಿಮ್ಮದೊಂದು ಉತ್ತರ